ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಎಂಎಲ್ಸಿ ಸಿಎಂ ಇಬ್ರಾಹಿಂ ( CM Ibrahim ) ಈ ಹಿಂದೆ ಹಲವು ಬಾರಿ ಪಕ್ಷ ತೊರೆಯುವ ಬಗ್ಗೆ ಮಾತ್ರ ಹೇಳುತ್ತಿದ್ದರು. ಆದರೆ ನೆನ್ನೆ ತಮ್ಮ ಕಾಂಗ್ರೆಸ್ ಪಕ್ಷದ ಸದಸ್ಯ ಸ್ಥಾನಕ್ಕೂ ಹಾಗೂ ಎಂಎಲ್ಸಿ ಪದವಿಗೂ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ಮತ್ತೊಂದು ಶಕ್ತಿ ಪತನಗೊಂಡಂತೆ ಆಗಿದೆ.
ಈ ಕುರಿತಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವಂತ ಅವರು, ಕಳೆದ 12 ವರ್ಷಗಳಿಂದ ಪಕ್ಷದಲ್ಲಿ ಇದ್ದೇನೆ. ಪರಿಷತ್ ವಿಪಕ್ಷ ನಾಯಕರ ಆಯ್ಕೆಗೆ ಚುನಾವಣೆಯಲ್ಲಿ 13 ಸದಸ್ಯರ ಬೆಂಬಲದೊಂದಿಗೆ ತಾನೇ ಗೆಲ್ಲುತ್ತಿದ್ದೆ.
ಆದ್ರೇ ಹಾಗೆ ಮಾಡದೇ ನನಗಿಂತಲೂ ಕಿರಿಯವರಾದಂತ ಬಿ.ಕೆ ಹರಿಪ್ರಸಾದ್ ಅವರನ್ನು ಪರಿಷತ್ ವಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಿದ್ದು ನನಗೆ ಬೇಸರ ತರಿಸಿದೆ. ಈ ಬಗ್ಗೆ ನಾನು ಕೇಳಿದ ಪ್ರಶ್ನೆಗೂ ಸರಿಯಾದ ಉತ್ತರ ಸಿಕ್ಕಿಲ್ಲ. ಈ ಎಲ್ಲಾ ಕಾರಣದಿಂದಾಗಿ ನಾನು ಕಾಂಗ್ರೆಸ್ ಪಕ್ಷದ ಸದಸ್ಯ ಸ್ಥಾನಕ್ಕೆ, ಎಂ.ಎಲ್ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ಮಹತ್ವದ ನಿರ್ಣಯವನ್ನು ತೆಗೆದು ಕೊಂಡಿದ್ದು ಶೀಘ್ರವೇ ಜೆಡಿಎಸ್ ಪಕ್ಷ ಸೇರ್ಪಡೆಯ ಚಿಂತನೆಯಲ್ಲಿದ್ದು .
ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರಿಗೆ ಯಾವುದೇ ಸ್ಥಾನ ಮಾನ ಕೊಡ್ತಾ ಇಲ್ಲ. ಮುಸ್ಲೀಂರನ್ನು ಗೌರವದಿಂದಲೂ ನಡೆಸಿಕೊಳ್ಳುತ್ತಿಲ್ಲ. ಬರೀ ನಮ್ಮನ್ನು ಬಳಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.
ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವ ನಿಟ್ಟಿನಲ್ಲಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದಂತೆ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಯಾರಿಗೆ ಸಲ್ಲಿಸಿದ್ದು ಪಕ್ಷದ ಹಿರಿಯರಾದ ಸಿದ್ಧರಾಮಯ್ಯನವರಿಗೆ ಕೂಡ ಕಳುಹಿಸಿದ್ದೆನೆ. ಅದನ್ನು ಅಂಗೀಕರಿಸೋದು, ಬಿಡೋದು ಅವರಿಗೆ ಸೇರಿದ್ದು ಎಂದು ತಿಳಿಸಿದರು.
ನನ್ನ ಜೊತೆಗೆ ಅನೇಕ ಕಾಂಗ್ರೆಸ್ ಮುಖಂಡರು ಪಕ್ಷವನ್ನು ತೊರೆಯಲಿದ್ದಾರೆ. ಇಲ್ಲಿವರೆಗಿನ ಎಲ್ಲ ಬೆಳವಣಿಗೆಗೆ ಕಾಂಗ್ರೆಸ್ ನ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಅವರಿಗೆ ಧನ್ಯವಾದ. ಮುಂದೆ ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಜೊತೆಗೆ ಚರ್ಚಿಸಿ, ಜೆಡಿಎಸ್ ಪಕ್ಷ ಸೇರುವ ಬಗ್ಗೆ ನಿರ್ಧಾರ ಪ್ರಕಟಿಸೋದಾಗಿ ಹೇಳಿದರು. ಈ ಹೇಳಿಕೆ ಮತ್ತು ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಡೆಯಲ್ಲಿ ಕಾಂಗ್ರೆಸ್ ಏರುಪೇರು ಮುಂದಿನ ರಾಜಕೀಯ ಭವಿಷ್ಯವನ್ನು ಚಿಂತಾಜನಕವಾಗಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.