Spread the love

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಹಿಜಾಬ್ ಅನುಮತಿ ( Hijab Row ) ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ತೀರ್ಪನ್ನು ಇಂದು ಹೈಕೋರ್ಟ್ ತ್ರಿಸದಸ್ಯ ನ್ಯಾಯಪೀಠವು ಇಂದು 10.30ಕ್ಕೆ ಅಂತಿಮ ತೀರ್ಪನ್ನು ಪ್ರಕಟಿಸಿದೆ. ಇದೇ ವೇಳೇ ನ್ಯಾಯಾಪೀಠ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ, ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು. ನಾವು ಇದನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಎಲ್ಲರೂ ಶಾಂತಿಯನ್ನು ಕಾಪಾಡಬೇಕು. ಸಮಸ್ತ ಜನತೆಗತೆ, ಎಲ್ಲ ಸಮುದಾಯದ ನಾಯಕರಿಗೆ, ಪಾಲಕರಿಗೆ, ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಕಳಕಳಿಯ ವಿನಂತಿ ಮಾಡುತ್ತೇನೆ. ನಾವೆಲ್ಲರೂ ಹೈಕೋರ್ಟ್ ತೀರ್ಪು ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡಿ, ಸಮಾನತೆ ಮತ್ತು ಇಕ್ಯತೆಯನ್ನು ಎತ್ತಿಹಿಡಿಯ ಬೇಕು ಎಂದು ಮನವಿ ಮಾಡಿದ್ದಾರೆ.


Spread the love