Spread the love

ಬೆಂಗಳೂರು: ಹಿರಿಯ ರಾಜಕಾರಣಿ ಕಾಂಗ್ರೆಸ್ ನ ಪ್ರಬಲ ನಾಯಕ ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ರವಾನಿಸುವ ಮೂಲಕ, ಕೈ ಪಕ್ಷದಿಂದ ಹೊರ ನಡೆಸಿದ್ದಾರೆ.


ಈ ರಾಜೀನಾಮೆ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ.

ಇಂದು ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು “ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ , ಸಿದ್ದರಾಮಯ್ಯ ಇಬ್ಬರನ್ನೂ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಬಂದಿದ್ದೇನೆ. ಪಕ್ಷ ಬಿಡಬೇಕಾದರೆ ನನ್ನ ಕಾರಣವಾಗಿರಬೇಕು ಇಲ್ಲವೇ ಪಕ್ಷದಿಂದ ಆಗಿರಬೇಕು. ಅದು ನನ್ನ ಕಡೆಯಿಂದ ಆಗಿದ್ದರೆ ಪಕ್ಷ ಸ್ಪಷ್ಟವಾಗಿ ಹೇಳಬೇಕು. ಒಂದು ರಾಷ್ಟ್ರೀಯ ಪಕ್ಷ ಬಿಡಲು ಬಲವಾದ ಕಾರಣದಿಂದ ಇರಬೇಕು ತಾನೇ…? ಎಂದು ಪ್ರಶ್ನಿಸಿದರು.
ನಾಯಕರನ್ನ ಭೇಟಿ ಮಾಡಿ ನನ್ನ ಸ್ಪಷ್ಟ ನಿರ್ಧಾರವನ್ನು ತಿಳಿಸಿದ್ದೇನೆ. 1989ರಲ್ಲಿ ಕಾಂಗ್ರೆಸ್ ಬಿ ಪಾರಂ ಕೊಟ್ಟು ನಂತರ ಬೇರೆಯವರಿಗೆ ಕೊಟ್ಟಿದ್ದರು. ನಂತರ 2019ರಲ್ಲಿ ಹಾಲಿ ಸಂಸದನಾಗಿದ್ರು ನಿಲ್ಲಲು ಅವಕಾಶ ಕೊಡಲಿಲ್ಲ. ನಾಲ್ಕು ಬಾರೀ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಪ್ಪಿಸಲಾಗಿದೆ. ನಾನು ಅತ್ಯಂತ ಕ್ರಿಯಾಶೀಲನಾಗಿ ಪಕ್ಷ ಸಂಘಟನೆ ಮಾಡಿದ್ದೇನೆ. ಪಕ್ಷಕ್ಕೆ ನನ್ನದೇ ಆದ ಅಳಿಲು ಸೇವೆ ಸಲ್ಲಿಸಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನನ್ನ ಸೇವೆಯು ಇದೇ ನನ್ನ ಕ್ರಿಯಾಶೀಲ ರಾಜಕೀಯ ನಿಂತಿಲ್ಲ. ಪಕ್ಷಕ್ಕೆ ಕೂಡ ನನ್ನ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ ಎಂದರು.

ಸಿದ್ದರಾಮಯ್ಯ ಪಕ್ಷ ತೊರೆಯುವ ನಿರ್ಧಾರ ಮಾಡಬೇಡಿ ಅಂತಾ ಹೇಳಿದ್ದಾರೆ. ಆದರೆ, ಪಕ್ಷದಿಂದ ಬಿಡುಗಡೆ ಮಾಡಿ ಎಂದು ಕೇಳಿದ್ದೇನೆ. ಇಷ್ಟು ವರ್ಷ ನಡೆದ ರಾಜಕೀಯ ಧೋರಣೆಗಳು ಈಗಿನ ಪರಿಸ್ಥಿತಿಗೆ ಕಾರಣವಾಗಿದೆ. ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ. ಮುಂದೆ ಒಳ್ಳೆಯ ಅವಕಾಶಗಳು ಬರಲಿದೆ ಎಂದು ಹೇಳಿದರು.
ಹಲವು ವರ್ಷಗಳ ಹಿಂದೆಯೇ ನಾನು ಕುಣಿಗಲ್ ಕ್ಷೇತ್ರದ ಶಾಸಕನಾಗಿದ್ದೆ. ಮುಂದಿನ ಚುನಾವಣೆಗೆ ಅಲ್ಲಿಯೇ ಸ್ಪರ್ಧಿಸಬೇಕೆಂದು ಜನ ಬಯಸಿದ್ದಾರೆ. ಅತೀ ಶೀಘ್ರದಲ್ಲೇ ಒಳ್ಳೆಯ ನಿರ್ಧಾರಕ್ಕೆ ಬರುತ್ತೇನೆ ಎಂದು ತಿಳಿಸಿದರು” .

ಇದೇ ವೇಳೆ ಬಿಜೆಪಿಯ ಆಪರೇಷನ್ ಕಮಲ ವಿಚಾರವಾಗಿ ಮಾತನಾಡಿದಂತ ಅವರು “ನಾನು ಏನೂ ಅಧಿಕಾರದಲ್ಲಿ ಇದ್ದೇನಾ ಆಪರೇಷನ್ ಮಾಡಲು ರಣದೀಪ್ ಸಿಂಗ್ ಸುರ್ಜೇವಾಲ ಪಕ್ಷದಲ್ಲೇ ಇರುವಂತೆ ಹೇಳಿದ್ದರು. ರಾಜ್ಯಸಭಾ ಚುನಾವಣೆ ವೇಳೆ ದೂರವಾಣಿ ಕರೆ ಮಾಡಿ ಹೇಳಿದ್ದರು. ಬಳಿಕ ಏನನ್ನೂ ಮಾತನ್ನಾಡಿಲ್ಲ ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನ್ನಾಡಲು ಬಯಸುವುದಿಲ್ಲ ಇವತ್ತೇ ರಾಜೀನಾಮೆ ಪತ್ರವನ್ನು ಕಳುಹಿಸುತ್ತೇನೆ. ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡಲು ಈ ರೀತಿ ಮಾಡುತ್ತಿಲ್ಲ ಮುಂದೆ ಕುಣಿಗಲ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ. ನನ್ನ ನಿರ್ಧಾರ ಅಚಲವಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ಇನ್ನೂ ಈ ಕುರಿತಂತೆ ರಾಜ್ಯ ಮತ್ತು ತುಮಕೂರು ಜಿಲ್ಲೆ ರಾಜಕಾರಣದಲ್ಲಿ ಹಲವು ಏರುಪೇರುಗಳು ಸಂಭವಿಸಲಿದ್ದು ಇವು ಮುಂದಿನ ವಿಧಾನಸಭಾ ಚುನಾವಣೆಗೆ ಯಾವತ್ತಿರುವು ಪಡೆದುಕೊಳ್ಳುತ್ತವೆ ಎಂಬುದು ಸ್ಥಳೀಯ ಕಾರ್ಯಕರ್ತರಿಗೆ ಕುತೂಹಲ, ಆತಂಕವಾದೆ ಇನ್ನೂ ಇತ್ತೀಚಿನ ರಾಜಕೀಯ ಲಕ್ಷಣಗಳಲ್ಲಿ ಜನಸಾಮಾನ್ಯರಿಗೆ ಇದು ಸಾಮಾನ್ಯವೆನಿಸಿದ್ದರು ಅವರಲ್ಲಿಯೂ ಕೂಡ ಒಂದಷ್ಟು ಅನುಮಾನಗಳು ಹೆಡೆ ಮಾಡಿವೆ.


Spread the love