Spread the love

ತುಮಕೂರು: ದಸರಾ ಹಬ್ಬದ ಅಂಗವಾಗಿ ರಾಜ್ಯದ ಮೂಲೆ ಮೂಲೆಗಳಿಂದ ತಮ್ಮ ಸ್ವಂತ ಊರುಗಳಿಗೆ ಹೊರಟ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಗಳಿಗೆ ಆರ್.ಟಿ.ಒ. ಅಧಿಕಾರಿಗಳು ಕಾನೂನಿನ ಬಿಸಿ ಮುಟ್ಟಿಸಿದ್ದಾರೆ.

ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆಗಳಿಗೆ ತೆರಳುವ ಖಾಸಗಿ ಬಸ್ ಗಳಲ್ಲಿ ಹಬ್ಬದ ಸಂದರ್ಭದವನ್ನು ಗಮನದಲ್ಲಿಟ್ಟುಕೊಂಡು ಇದೆ ಸರಿಯಾದ ಸಮಯ ಎಂದು ಭಾವಿಸಿ ನಿತ್ಯದ ಟಿಕೆಟ್ ದರಕಿಂತಲು ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡಲಾಗುತ್ತಿದ್ದು ಕೆಲವು ಸಾರ್ವಜನಿಕ ಪ್ರಾಯಾಣಿಕರ ದೂರುಗಳ ಹಿನ್ನೆಲೆಯಲ್ಲಿ ಆರ್.ಟಿ.ಒ. ಅಧಿಕಾರಿಗಳು ತುಮಕೂರಿನಲ್ಲಿ ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಬೆಂಗಳೂರಿನ ಮಾರ್ಗವಾಗಿ ಹೊಸದುರ್ಗಕ್ಕೆ ತೆರಳುತ್ತಿದ್ದ ಎರಡು ಖಾಸಗಿ ಬಸ್ ಗಳನ್ನು ವಶಕ್ಕೆ ಪಡೆಯಲಾಗಿದ್ದು. ಪ್ರಯಾಣಿಕರಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತುಮಕೂರು ಆರ್.ಟಿ.ಒ. ಇನ್ಸ್ ಪೆಕ್ಟರ್ ಶರೀಫ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಅಲ್ಲದೇ, ಬೆಂಗಳೂರಿನಲ್ಲಿ ಮಾತ್ರ ಫ್ಯಾಕ್ಟರಿಗಳಿಗೆ ಓಡಿಸಲು ಪರ್ಮಿಟ್ ಇರುವ ಬಸ್ ಹೊಸದುರ್ಗಕ್ಕೆ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿತ್ತು. ಈ ಬಸ್ ಕೂಡ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.


Spread the love