ಅ.2: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಪರಾಜಿತ ಅಭ್ಯರ್ಥಿ ಬಿ.ಸುರೇಶ್ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ.
ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಕೀಲರ ವಾದವನ್ನು ಆಲಿಸಿದ ನಂತರ ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿತು.
ಪ್ರಕರಣವೇನು?: 2018ರ ಸಾರ್ವತ್ರಿಕ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೌರಿಶಂಕರ್ ವ್ಯಾಪಕ ಚುನಾವಣಾ ಅಕ್ರಮ ಎಸಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಮತದಾರರಿಗೆ ಮತಯಾಚನೆ ಪತ್ರದ ಜೊತೆ ಗುಂಪು ಆರೋಗ್ಯ ವಿಮಾ ಪಾಲಿಸಿಯ ಆಮಿಷವೊಡ್ಡಿ ಅವರಿಂದ ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಹೀಗಾಗಿ, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರ ಸುರೇಶ್ಗೌಡ ಕೋರಿದ್ದಾರೆ.