Spread the love

ಬೆಂಗಳೂರು : ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ . ಮೀಸಲಾತಿ ಹೆಚ್ಚುಡವನ್ನು ಕುರಿತು ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ.

ಎಸ್ ಸಿ ಸಮುದಾಯಕ್ಕೆ ಮೀಸಲಾತಿ ಶೇ 15 ರಿಂದ 17, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಿದ್ದಾರೆ.
ಮೀಸಲಾತಿ ಹೆಚ್ಚಳದ ಕುರಿತು ನಾಳೆಯೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಈ ಮೂಲಕ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆಯ ಸಂತಸದ ಸುದ್ದಿ ನೀಡಿದ್ದಾರೆ. ನ್ಯಾ.ನಾಗಮೋಹನ್ ದಾಸ್ ವರದಿ ಆಧರಿಸಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದ್ದು.

ಇಂದು ಬಿಜೆಪಿ ಕಾರ್ಯಕಾರಣಿ ಸಭೆ ನಡೆದಿದ್ದು. ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಎಸ್ ಸಿ. ಎಸ್ ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಎಂದು ಹೇಳಿದ್ದರು.

ಸಾಮಾಜಿಕವಾಗಿಯೂ ಹಲವು ಸಮಸ್ಯೆ ಬಗೆಹರಿಸಲು ಬದ್ಧವಾಗಿದ್ದೇನೆ. ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ. ಜನಪರವಾಗಿರುವ ಆಡಳಿತವನ್ನುನಮ್ಮ ಸರ್ಕಾರ ಮಾಡುತ್ತಿದೆ ಚುನಾವಣೆ ದೃಷ್ಟಿಯಿಂದ ಇದು ಮಹತ್ವದ್ದು ಎಂದು ಸಿಎಂ ಹೇಳಿದ್ದರು. ಎಸ್‌ ಟಿ ವರ್ಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಲಾಗಿದ್ದು, ಈ ನಿಟ್ಟಿನಲ್ಲಿ ಕೋರ್‌ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.


Spread the love