Spread the love

ಬೆಂಗಳೂರು:ತಳವಾರ ಮತ್ತು ಪರಿವಾರ ಸಮುದಾಯದ ಬಹುದಿನಗಳ ಹೋರಾಟಕ್ಕೆ ಇಂದು ನ್ಯಾಯಾದೊರಕಿದಂತಾಗಿದೆ. ಕಳೆದ ತಿಂಗಳಲ್ಲಿ ತಳವಾರ ಸಮುದಾಯದ ನಾಯಕ ಶಿವರಾಜ್ ಮೇಟಿಕರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಜಾಥಾ ಮೂಲಕ ನಡೆದು ಬಂದು ಹೋರಾಟ ಹಮ್ಮಿಕೊಂಡು ಪ್ರಸ್ತುತ ಸರ್ಕಾರವನ್ನು ತೀಕ್ಷ್ಣವಾಗಿ ಪ್ರಶ್ನಿಸಿ , ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರ ವಿಕೃತ ಚಿತ್ರಗಳನ್ನು ಪ್ರದರ್ಶಿಸಿ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಬಿಜೆಪಿ ಸರ್ಕಾರಕ್ಕೆ ಸವಾಲು ಹೊಡಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿ . ಹೋರಾಟದಿಂದ ಎಚ್ಚೆತ್ತುಕೊಂಡ ಸರ್ಕಾರ ಇಂದು ತಳವಾರ ಮತ್ತು ಪರಿವಾರ ನಾಯಕ ಜಾತಿಗಳನ್ನು ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಳವಾರ ಮತ್ತು ಪರಿವಾರ ಜಾತಿಗಳನ್ನು ಎಸ್ಟಿ ವರ್ಗಕ್ಕೆ ಸೇರ್ಪಡೆ ಮಾಡಿದ ಹಿನ್ನೆಲೆ, ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ಈ ಜಾತಿಗಳನ್ನು ರಾಜ್ಯ ಸರ್ಕಾರ ತೆಗೆದುಹಾಕಿದೆ. ಈ ಜಾತಿಗಳನ್ನು ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕುವ ಸಂಬಂಧ ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ. ಹೀಗಾಗಿ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ. ಎಸ್ಟಿ ವರ್ಗಕ್ಕೆ ಪರಿವಾರ ಮತ್ತು ತಳವಾರ ಜಾತಿಗಳನ್ನು ಸೇರಿಸಿರುವ ಹಿನ್ನೆಲೆಯಲ್ಲಿ ಸದರಿ ಜಾತಿಗಳಿಗೆ ಸರ್ಕಾರವು ಪರಿಶಿಷ್ಟ ಪಂಗಡದ ಪ್ರಮಾಣಪತ್ರಗಳನ್ನು ವಿತರಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ನಿರ್ದೇಶನ ನೀಡಿದೆ.

ವರದಿ : ಅಜಿತ್ ಕುಮಾರ್ ಬೆಳ್ಳಿಬಟ್ಲು ಓ


Spread the love