ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸ್ವಾಗತಿಸಿದರು. ಎಚ್ಎಎಲ್ನಿಂದ ಮೋದಿ ನೇರವಾಗಿ ವಿಧಾನಸೌಧದ ಬಳಿಯ ಶಾಸಕರ ಭವನಕ್ಕೆ ತೆರಳಲಿದ್ದಾರೆ.
ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಸಂಚರಿಸಲು ಕೆಲವೇ ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಬೆಂಗಳೂರು ಸಿಟಿ ರೈಲು ನಿಲ್ದಾಣದಲ್ಲಿ ಹತ್ತಲು ಎಲ್ಲರಿಗೂ ಅವಕಾಶ ಇಲ್ಲ. ಆದರೆ ಮುಂದಿನ ನಿಲ್ದಾಣಗಳಲ್ಲಿ ಪ್ರಯಾಣಿಕರು ಮುಕ್ತವಾಗಿ ಸಂಚರಿಸಬಹುದಾಗಿದೆ. ರೈಲ್ವೆ ಇಲಾಖೆಯು ಪ್ರಧಾನಿಗೆ ಆನೆ ಮೇಲೆ ಅಂಬಾರಿ ಇರುವ ನೆನಪಿನ ಕಾಣಿಕೆ ನೀಡಲಿದೆ.