ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರದ ಕುರಿತು ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ‘ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮರ್ಥಿಸಿದ್ದಾರೆ.
ಈ ದೇಶ, ಈ ಮಣ್ಣಿನ ಅಸ್ಮಿತೆಯಾಗಿರುವ ಹಿಂದೂ ಎಂಬ ಪದವನ್ನೇ ಅಶ್ಲೀಲ ಎಂದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷರು ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ. ಹಿಂದೂ ಧರ್ಮದ ವಿರುದ್ಧ ಕಾಂಗ್ರೆಸ್ ಸಮರ ಸಾರುತ್ತಿದೆಯೇ? ಹಿಂದೂ ಧರ್ಮವನ್ನು ತೆಗಳುವುದು ಕಾಂಗ್ರೆಸ್ ಪಕ್ಷದ ಚುನಾವಣಾ ಕಾರ್ಯಸೂಚಿಯೇ ? ಅದೇ ಆಗಿದ್ದಲ್ಲಿ ಬಹಿರಂಗವಾಗಿ ಹಿಂದೂಗಳ ಮತ ನಮಗೆ ಬೇಡ ಎನ್ನಲು ಕಾಂಗ್ರೆಸ್ ಪಕ್ಷಕ್ಕೆ ತಾಕತ್ತು ಇದೆಯೇ..? ಎಂದು ಕಾಂಗ್ರಸ್ ಪಕ್ಷದ ವಿರುದ್ಧ ಬಿಜೆಪಿ ಸವಾಲ್ ಹಾಕಿದೆ.