Spread the love

ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ಕಳೆದ ಕೆಲ ತಿಂಗಳ ಹಿಂದೆ ಮುದ್ದಾದ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿರುವ ಅಮೂಲ್ಯ ಮಕ್ಕಳಿಗೆ ಅದ್ದೂರಿಯಾಗಿ ನಾಮಕರಣ ಮಾಡಿದ್ದಾರೆ.

ಬಾಲನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಮೂಲ್ಯ ಬಳಿಕ ಸ್ಟಾರ್ ನಟಿಯಾಗಿ ಗುರುತಿಸಿಕೊಂಡವರು. ಸಿನಿಮಾಗಳಲ್ಲಿ ಸಾಕಷ್ಟು ಅವಕಾಶ ಇರುವಾಗಲೆ ಜಗದೀಶ್ ಜೊತೆ ಸಪ್ತಪದಿ ತುಳಿದ ಅಮೂಲ್ಯ ಇದೀಗ ಮಕ್ಕಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅಮೂಲ್ಯ ಹಾಗೂ ಜಗದೀಶ್ ಮಕ್ಕಳ ನಾಮಕರಣ ಶಾಸ್ತ್ರವನ್ನು ಅದ್ದೂರಿಯಾಗಿ ಮಾಡಿದ್ದಾರೆ.

ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂದು ಹೆಸರಿಟ್ಟಿದ್ದಾರೆ. ಇನ್ನೂ ಈ ಅದ್ದೂರಿ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ತಾರೆಯರು, ಆಪ್ತರು ಸಾಕ್ಷಿಯಾಗಿದ್ದಾರೆ. ಮುದ್ದಾದ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ಶುಭಹಾರೈಸಿದ್ದಾರೆ.


Spread the love