ಚೆನ್ನೈ: ತಮಿಳು ಮಾಧ್ಯಮದಲ್ಲೂ ವೈದ್ಯಕೀಯ ಶಿಕ್ಷಣವನ್ನು ಪ್ರಾರಂಭಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದರು. ಚೆನ್ನೈನಲ್ಲಿ ಮಾತನಾಡಿದ ಅವರು, ತಮಿಳು ವಿಶ್ವದ ಪ್ರಾಚೀನ ಭಾಷೆಗಳಲ್ಲಿ ಒಂದಾಗಿದೆ. ತಮಿಳು ವ್ಯಾಕರಣವು ವಿಶ್ವದ ಅತ್ಯಂತ ಪ್ರಾಚೀನ ವ್ಯಾಕರಣವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳು ಭಾಷೆಯನ್ನು ತಮಿಳುನಾಡು ಮಾತ್ರವಲ್ಲ, ರಾಷ್ಟ್ರದಲ್ಲೇ ಪ್ರಚಾರ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ದೇಶದ ಹಲವು ರಾಜ್ಯಗಳು ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣವನ್ನು ಪ್ರಾದೇಶಿಕ ಭಾಷೆಗಳಲ್ಲಿ ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣವನ್ನು ತಮಿಳಿನಲ್ಲಿ ಆರಂಭಿಸುವಂತೆ ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಇದರಿಂದ ತಮಿಳು ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಸುಲಭವಾಗಿ ಗ್ರಹಿಸಲು ಸಹಾಯ ಮಾಡುತ್ತದೆ. ಇದು ತಮಿಳಿನಲ್ಲಿ ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸಹಾಯ ಮಾಡುತ್ತದೆ. ಜೊತೆಗೆ ಪ್ರಾಚೀನ ಭಾಷೆಗೆ ಉತ್ತಮ ಸೇವೆಯಾಗಿದೆ ಎಂದು ಹೇಳಿದರು.