ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರ್ಗಿ ಪ್ರವಾಸ ಹಿನ್ನೆಲೆಯಲ್ಲಿ ಮತ್ತೆ ಪೇಸಿಎಂ ಪೋಸ್ಟರ್ ಪ್ರತ್ಯಕ್ಷವಾಗಿವೆ.ಮುಖ್ಯಮಂತ್ರಿ ಬೊಮ್ಮಾಯಿ ಅವರ ವಿರುದ್ಧ ಮತ್ತೆ ಕಾಂಗ್ರೆಸ್ ನಿಂದ ಪೇಸಿಎಂ ಅಸ್ತ್ರ ಪ್ರಯೋಗಿಸಲಾಗಿದೆ.
ಕಲಬುರ್ಗಿ ನಗರದ ಹಲವು ಕಡೆ ಪೇಸಿಎಂ ಪೋಸ್ಟರ್ ಅಂಟಿಸಲಾಗಿದೆ. ರಾತ್ರೋರಾತ್ರಿ ಕಾಂಗ್ರೆಸ್ ಕಾರ್ಯಕರ್ತರು ಕಲಬುರ್ಗಿ ನಗರದ ಹಲವಡೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಾರೆ.
ಸಂಗಮೇಶ್ವರ ಕಾಲೋನಿ, ಟ್ಯಾಂಕ್ ಬಂಡ್ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಪೋಸ್ಟರ್ ಗಳನ್ನು ಹಚ್ಚಲಾಗಿದೆ. ಸಿಎಂಗೆ ಮುಜುಗರ ಉಂಟು ಮಾಡಲು ಕಾಂಗ್ರೆಸ್ ಕಾರ್ಯಕರ್ತರು ತಂತ್ರ ರೂಪಿಸಿ ಈ ರೀತಿ ಪೋಸ್ಟರ್ ಹಚ್ಚಿದ್ದಾರೆ.