Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಸಿಎಂ ಬೊಮ್ಮಾಯಿ ಸೇರಿದಂತೆ ಇತರರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಪ್ರಧಾನ ಕಾರ್ಯದರ್ಶಿ ವಿಜಯ್ ಮುಳುಗುಂದ್ ಅವರ ಜತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ಮತದಾರರ ಪಟ್ಟಿ ಅಕ್ರಮ ಸಂಬಂಧ ಗುರುವಾರ ದೂರು ನೀಡಿದರು.

ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪೊಲೀಸ್ ಕಮಿಷನರ್ ಆಫೀಸರ್​ಗೆ ಹೋಗಿ ಕಂಪ್ಲೇಂಟ್ ಫೈಲ್ ಮಾಡಿದ್ದೇವೆ. ಅವ್ರು ಮುಂದೆ ಯಾರಿಗೆ ಕಳಿಸ್ತಾರೋ ಕಳಿಸ್ಲಿ. ಯಾರ್ ಯಾರು ದುರುಪಯೋಗ ಮಾಡಿಕೊಂದಿದ್ದಾರೋ ಅವರ ಮೇಲೆ ದೂರು ನೀಡಿದ್ದೇವೆ ಎಂದರು.

ಸರ್ಕಾರಿ ನೌಕರರೆಂದು ಐಡೆಂಟಿಟಿ ಕಾರ್ಡ್ ಕೊಟ್ಟಿದ್ದಾರೆ. ಎಲೆಕ್ಷನ್ ಕಮೀಷನ್ ಮಾಡೋ ಕೆಲಸವನ್ನು ಬೇರೆ ಖಾಸಗಿಯವರಿಗೆ ಕೊಟ್ಟಿದ್ದಾರೆ. ತುಷಾರ್ ಗಿರಿನಾಥ್ ಸೀನಿಯರ್ ಐಎಎಸ್ ಅಧಿಕಾರಿ ಆಗಿದ್ದಾರೆ. ಈ ಕೆಲಸದಿಂದ ಅವರು ಗೌರವ ಕಳೆದುಕೊಳ್ಳುತ್ತಿದ್ದಾರೆ ಎಂದು ಡಿಕೆಶಿ ಹೇಳಿದರು.


Spread the love