Spread the love

ಬೆಂಗಳೂರು: ಕೋಟ್ಯಂತರ ರೂಪಾಯಿ ವಿದ್ಯುತ್‌ ಶುಲ್ಕ ಬಾಕಿ ಇರಿಸಿಕೊಂಡಿರುವ ಬಿಡಬ್ಲ್ಯೂಎಸ್‌ಎಸ್‌ಬಿ, ಬಿಬಿಎಂಪಿ, ತೋಟಗಾರಿಕೆ ಇಲಾಖೆ, ಬಿ.ಡಿ.ಎ, ನಗರ ಸಭೆ ಮತ್ತು ಗ್ರಾಮಸಭೆಗಳಿಗೆ ಬೆಸ್ಕಾಂನ ಹೆಬ್ಬಾಳ ಮತ್ತು ಜಾಲಹಳ್ಳಿ ವಿಭಾಗಗಳ ಕಾರ್ಯನಿರ್ವಾಹಕ ಇಂಜಿನಿಯರ್ಗಳು ಪ್ರತ್ಯೇಕ ನೋಟಿಸ್​​ ಜಾರಿಗೊಳಿಸಿದೆ.

ಬೆಸ್ಕಾಂನ ಹೆಬ್ಬಾಳ ವಿಭಾಗದ ವ್ಯಾಪ್ತಿಗೆ ಬರುವ ಉಪ ವಿಭಾಗಗಳಾದ ಗಂಗಾನಗರ (ಸಿ-4), ಕಾವಲಬೈರಸಂದ್ರ (ಸಿ-5), ಯಲಹಂಕ (ಸಿ-7) ಮತ್ತು ಸಹಕಾರನಗರ (ಸಿ -8) ಉಪ ವಿಭಾಗಗಳಿಗೆ ಬಿಡಬ್ಲ್ಯೂಎಸ್‌ಎಸ್‌ಬಿ, ಬಿಡಿಎ, ಬಿಬಿಎಂಪಿ, ತೋಟಗಾರಿಕೆ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ನೀರು ಸರಬರಾಜು ಮತ್ತು ಬೀದಿ ದೀಪ ಸ್ಥಾವರಗಳ ವಿದ್ಯುತ್‌ ಬಾಕಿ ಸೆಪ್ಟೆಂಬರ್‌ ಅಂತ್ಯಕ್ಕೆ 131.18 ಕೋಟಿ ರೂಪಾಯಿ ಆಗಿದ್ದು, ಬಾಕಿ ಪಾವತಿಸಲು ಹೆಬ್ಬಾಳ ಕಾರ್ಯನಿರ್ವಾಹಕ ಇಂಜಿನಿಯರ್‌ ನೋಟಿಸ್‌ ಜಾರಿಗೊಳಿಸಿದ್ದಾರೆ.

ನಾಲ್ಕೂ ಉಪ ವಿಭಾಗಗಳಿಗೆ ವಿದ್ಯುತ್‌ ಶುಲ್ಕ ಬಾಕಿ ಇರಿಸಿಕೊಂಡಿರುವ ಸರಕಾರಿ ಸಂಸ್ಥೆಗಳ ಪೈಕಿ ಬಿಡಬ್ಲ್ಯೂಎಸ್‌ಎಸ್‌ಬಿ ಅತೀ ಹೆಚ್ಚು 65.09 ಕೋಟಿ ರೂಪಾಯಿ ಬಾಕಿ ಇರಿಸಿಕೊಂಡಿದ್ದು, ಬಿಬಿಎಂಪಿ ನೀರು ಸರಬರಾಜು ವಿಭಾಗ 54.53 ಕೋಟಿ ರೂ. ವಿದ್ಯುತ್‌ ಶುಲ್ಕ ಪಾವತಿಸಬೇಕಾಗಿದೆ.


Spread the love

By admin