ರಾಜಧಾನಿ ಬೆಂಗಳೂರಿನ ದಕ್ಷಿಣ ಭಾಗದ ವಿವಿಧೆಡೆ ಇಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಕಂಡುಬರಲಿದೆ ಎಂದು ಬೆಂಗಳೂರು ಜಲಮಂಡಳಿ ಪ್ರಕಟಣೆ ಹೊರಡಿಸಿದೆ. ದಕ್ಷಿಣ ಬೆಂಗಳೂರಿನ ಸುತ್ತಮುತ್ತ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀರು ಸರಬರಾಜು ಮಾರ್ಗಗಳನ್ನು ಬದಲಾಯಿಸಲಾಗುತ್ತಿದೆ. ಹೀಗಾಗಿ ನವೆಂಬರ್ 21ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನೀರು ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಬಿಡಬ್ಲ್ಯೂಎಸ್ಎಸ್ಬಿ ಮಾಹಿತಿ ನೀಡಿದೆ. ಕೆಆರ್ಪುರಂನಿಂದ ಸಿಲ್ಕ್ಬೋರ್ಡ್ವರೆಗೆ ಹೊರವರ್ತುಲ ರಸ್ತೆಯಲ್ಲಿನ ಕಾಮಗಾರಿ ನಡೆಯಲಿದೆ. ಹೀಗಾಗಿ ಜಂಬೂ ಸವಾರಿ ದಿಣ್ಣೆ, ಪುಟ್ಟೇನಹಳ್ಳಿ, ಕೋಣನಕುಂಟೆ ಕ್ರಾಸ್, ಜರಗನಹಳ್ಳಿ, ಜೆಪಿನಗರ 4,5,6 ಮತ್ತು 7ನೇ ಹಂತ, ತಿಲಕ್ ನಗರ, ವಿಜಯಾಬ್ಯಾಂಕ್ ಲೇಔಟ್, ಬಿಳೇಕಹಳ್ಳಿ, ರೋಲೆ ಕಾಲೋನಿ, ಕೋಡಿಚಿಕ್ಕನಹಳ್ಳಿ, ಎಚ್ಎಸ್ಆರ್ , ಬೊಮ್ಮನಹಳ್ಳಿ, ಮಂಗಮ್ಮನಪಾಳ್ಯ, ಹೊಸ ಪಾಳ್ಯ, ಎಲೆಕ್ಟ್ರಾನಿಕ್ ಸಿಟಿ 1,2,3ನೇ ಬ್ಲಾಕ್, ಕೋರಮಂಗಲ, ಕುದುರೆಮುಖ ಕಾಲೋನಿ, ಮೇಸ್ತ್ರಿ ಪಾಳ್ಯ, ಹೊಸ ಗುರಪ್ಪನಪಾಳ್ಯ, ಕೆಇಬಿ ಲೇಔಟ್, ಸುದರ್ಶನ ಸ್ಲಂ, ಬಿಸ್ಮಿಲ್ಲಾನಗರ, ಮಾರುತಿ ಲೇಔಟ್, ನಾರಾಯಣಪ್ಪ ಗಾರ್ಡನ್, ಮೈಕೋ ಲೇಔಟ್, ಬಾಲಾಜಿನಗರ, ಎನ್ಎಸ್ ಪಾಳ್ಯ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಕಂಡುಬರಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.