ಮೌಂಟ್ ಮೌಂಗನುಯಿ: ಮೊದಲು ಟಾಸ್ ಗೆದ್ದ ಅತಿಥೇಯ ತಂಡ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಇತ್ತ ಬ್ಯಾಟಿಂಗ್ ಆರಂಭಿಸಿದ ಹಾರ್ದಿಕ್ ಪಾಂಡ್ಯ ನೇತೃತ್ವದ ಯುವ ತಂಡ ಆರಂಭದಲ್ಲಿ ಡಲ್ ಹೊಡೆಸಿತು. ಆರಂಭಿಕರಾಗಿ ಕಣಕ್ಕಿಳಿದ ರಿಷಭ್ ಪಂತ್ 6 ರನ್ (13 ಎಸೆತ, 1 ಬೌಂಡರಿ) ಸಿಡಿಸಿ ಪೆವಿಲಿಯನ್ ದಾರಿ ಹಿಡಿದರು. ಆರಂಭಿಕ ಆಟಗಾರ ಇಶಾನ್ ಕಿಶನ್ ಒಂದು ಕಡೆ ಅಬ್ಬರಿಸುತ್ತ 36 ರನ್ (31 ಎಸೆತ, 4 ಬೌಂಡರಿ, 1 ಸಿಕ್ಸ್) ಚಚ್ಚಿ ಅಬ್ಬರ ನಿಲ್ಲಿಸಿದರು. ಬಳಿಕ ಬಂದ ಶ್ರೇಯಸ್ ಅಯ್ಯರ್ ಆಟ 13 ರನ್‍ಗೆ (9 ಎಸೆತ, 1 ಬೌಂಡರಿ, 1 ಸಿಕ್ಸ್) ಅಂತ್ಯಕಂಡಿತು.
ಬ್ಯಾಟಿಂಗ್‍ನಲ್ಲಿ ಸೂರ್ಯಕುಮಾರ್ ಯಾದವ್ ಸಿಡಿಸಿದ ಶತಕಕ್ಕೆ ಕಂಗಾಲಾಗಿದ್ದ ನ್ಯೂಜಿಲೆಂಡ್‍ಗೆ ಭಾರತ ನೀಡಿದ 192 ರನ್‍ಗಳ ಬೃಹತ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ ಹೋರಾಟದ ಹೊರತಾಗಿಯೂ 18.5 ಓವರ್‌ಗಳಲ್ಲಿ ಅಂತ್ಯಕ್ಕೆ 126 ರನ್‍ಗಳಿಗೆ ಸರ್ವಪತನ ಕಂಡಿತು. ಮೊದಲ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತ್ತು. ಇಂದು ನಡೆದ ಎರಡನೇ ಪಂದ್ಯದಲ್ಲಿ ಪಾಂಡ್ಯ ಪಡೆ 65 ರನ್‍ಗಳ ಭರ್ಜರಿ ಜಯ ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ
ಡೆವೂನ್ ಕಾನ್ವೇ 25 ರನ್ (22 ಎಸೆತ, 3 ಬೌಂಡರಿ) ಸಿಡಿಸಿ ವಿಕೆಟ್ ಕೈಚೆಲ್ಲಿಕೊಂಡರು. ಆ ಬಳಿಕ ಕುಸಿತ ಕಂಡ ನ್ಯೂಜಿಲೆಂಡ್ ತಂಡಕ್ಕೆ ವಿಲಿಯಮ್ಸನ್ ಮಾತ್ರ ಆಸರೆಯಾದರು. ಕೊನೆಗೆ 18ನೇ ಓವರ್‌ನಲ್ಲಿ ವಿಲಿಯಮ್ಸನ್ 61 ರನ್ (52 ಎಸೆತ, 4 ಬೌಂಡರಿ, 2 ಸಿಕ್ಸ್) ಸಿಡಿಸಿ ಔಟ್ ಆಗುವುದರೊಂದಿಗೆ ನ್ಯೂಜಿಲೆಂಡ್ ಗೆಲುವಿನ ಕನಸು ಭಗ್ನಗೊಂಡಿತು. ಅಂತಿಮವಾಗಿ 18.5 ಓವರ್‌ಗಳ ಅಂತ್ಯಕ್ಕೆ 126 ರನ್‍ಗಳಿಗೆ ಆಲೌಟ್ ಆಯಿತು.