ನವದೆಹಲಿ: ಭಾರತ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಅರುಣ್ ಗೋಯೆಲ್ ಅಧಿಕಾರ ವಹಿಸಿಕೊಂಡಿದ್ದಾರೆ.ಇವರು ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದು (1985 ಪಂಜಾಬ್ ಕೇಡರ್) ರಾಷ್ಟ್ರಪತಿಗಳು ನೇಮಕ ಮಾಡಿ ಆದೇಶಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ಅವರೊಂದಿಗೆ ಇದೀಗ ಗೋಯೆಲ್ ಕಾರ್ಯನಿರ್ವಹಿಸಲಿದ್ದಾರೆ. ಭಾರಿ ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ಸ್ಥಾನದಿಂದ ಅರುಣ್ ಗೋಯೆಲ್ ಶುಕ್ರವಾರ ಸ್ವಯಂ ನಿವೃತ್ತಿ ಪಡೆದಿದ್ದರು.