ವಾಷಿಂಗ್ಟನ್: ಅಮಾನತುಗೊಂಡಿದ್ದ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವಿಟರ್ ಖಾತೆ ಮರುಸ್ಥಾಪನೆ ಮಾಡಲಾಗುತ್ತದೆ ಎಂದು ಟ್ವಿಟರ್‍ನ ನೂತನ ಮುಖ್ಯಸ್ಥ ಎಲಾನ್ ಮಸ್ಕ್ ತಿಳಿಸಿದ್ದಾರೆ.
ಕಳೆದ 2021ರ ಜನವರಿ 6ರಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಘೋಷಣೆ ವೇಳೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ದಾಂದಲೆ ನಡೆಸಿದಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಟ್ರಂಪ್ ಅವರ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗಿತ್ತು.
ಇದೀಗ ಪರಿಸ್ಥತಿ ಬದಲಾಗಿದೆ. ಇದರ ಬೆನ್ನಲ್ಲೇ, ಟ್ರಂಪ್ ಖಾತೆ ಮರುಸ್ಥಾಪನೆ ಕುರಿತು ಜನಮತ ಆರಂಭಿಸಿದ್ದರು. ಇದಕ್ಕೆ ಶೇ.51.8ರಷ್ಟು ಜನರು ಟ್ರಂಪ್ ಟ್ವಿಟರ್ ಮರುಸ್ಥಾಪಿಸಬೇಕೆಂದು ಹಾಗೂ ಶೇ.48.2ರಷ್ಟು ಜನರು ಬೇಡ ಎಂದು ಪ್ರತಿಕ್ರಿಯೆ ನೀಡಿದ್ದರು.
ಈ ಬಗ್ಗೆ ಸ್ವತಃ ಎಲಾನ್ ಮಸ್ಕ್ ಅವರೇ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಜನರ ಅಭಿಪ್ರಾಯದಂತೆ ಡೋನಾಲ್ಡ್ ಟ್ರಂಪ್ ಅವರ ಟ್ವಿಟರ್ ಖಾತೆಯನ್ನು ಮರುಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.