ಆಂಧ್ರಪ್ರದೇಶ: ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯಲ್ಲಿಂದು ಕಾರು ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಛತ್ತೀಸ್ಗಢ ಮೂಲದವರು ಎಂದು ಗುರುತಿಸಲಾಗಿದೆ. ಭದ್ರಾಚಲಂಗೆ ಭೇಟಿ ನೀಡಿ ಮರಳಿ ಛತ್ತೀಸ್ಗಢಕ್ಕೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅತಿವೇಗವೇ ಈ ದುರ್ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.