Spread the love

ಅಂಕಾರಾ: ಪಶ್ಚಿಮ ಏಷ್ಯಾದ ದೇಶಟರ್ಕಿಯ ರಾಜಧಾನಿ ಅಂಕಾರಾದಲ್ಲಿ ಇಂದು ಬೆಳಗ್ಗೆ 6:28ಕ್ಕೆ ಭೂಕಂಪನದ ಅನುಭವವಾಗಿದೆ. ಮಾಹಿತಿ ಪ್ರಕಾರ, ಅಂಕಾರಾದಿಂದ ಪಶ್ಚಿಮ-ವಾಯುವ್ಯಕ್ಕೆ 186 ಕಿ.ಮೀ ದೂರದಲ್ಲಿ ರಿಕ್ಟರ್‌ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ತಿಳಿದುಬಂದಿಲ್ಲ.

ದಕ್ಷಿಣ ಅಮೆರಿಕದ ದೇಶ ಮೆಕ್ಸಿಕೋದ ಬಾಜಾ ಕ್ಯಾಲಿಫೋರ್ನಿಯಾದ ಕರಾವಳಿಯಲ್ಲಿ ಮಂಗಳವಾರ 6.2 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಬಾಜಾ ಕ್ಯಾಲಿಫೋರ್ನಿಯಾದ ಲಾಸ್ ಬ್ರಿಸಾಸ್‌ನ ಪಶ್ಚಿಮ-ನೈಋತ್ಯಕ್ಕೆ ಸುಮಾರು 30 ಕಿಮೀ (18.6 ಮೈಲುಗಳು) ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ.


Spread the love