ಬೀದರ್ :ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟಾವು ಹಂತಕ್ಕೆ ಬಂದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಂಕಿಗಾಹುತಿಯಾಗಿದೆ. ಬೀದರ್ ಜಿಲ್ಲೆ ಚಿಟಗುಪ್ಪ ತಾಲ್ಲೂಕಿನಲ್ಲಿರುವ ತಾಳಮಡಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು 10 ಎಕರೆಯಲ್ಲಿ ಬೆಳೆದಿದ್ದ ಸುಮಾರು 12 ಲಕ್ಷದಿಂದ 15 ಲಕ್ಷದ ರೂಪಾಯಿ ಮೌಲ್ಯದ ಕಬ್ಬು ಬೆಂಕಿಗಾಹುತಿಯಾಗಿದೆ.ಬಾಬು ಶೆಟ್ಟಿ ಪಾಟೀಲ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆ ಇದಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಘಟನೆ ಹಿನ್ನೆಲೆಯಲ್ಲಿ ಬೆಂಕಿ ನಂದಿಸಿದಲು ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದರಾದರೂ ಬರುವ ಮುನ್ನವೇ ಕಬ್ಬು ಬೆಂಕಿಗಾಹುತಿ ಯಾಗಿತ್ತು.10ಎಕರೆಯಷ್ಟು ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಕಬ್ಬಿನ ಬೆಳೆ ಭಸ್ಮವಾದ ಘಟನೆ ಜರುಗಿದೆ.. ಈ ಅಗ್ನಿ ಅವಘಡದಲ್ಲಿ ಕಬ್ಬು ಸುಟ್ಟಿದ್ದಲ್ಲದೇ, ಹನಿ ನೀರಾವರಿ, ಪೈಪ್ ಲೈನ್ ಸೇರಿದಂತೆ ರೈತರ ಕೃಷಿ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.ಈ ಸಂಬಂಧ ಮನ್ನಾಕೇಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.