Spread the love

ಬೆಂಗಳೂರು: ಟೆಸ್ಟ್ ಡ್ರೈವ್ ಮಾಡ್ತೀವಿ ಅಂತ ಗಾಡಿಯ ಕೀ ಪಡೆದು ವಾಹನಗಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಆರೋಪಿಗಳನ್ನು ಬೆಂಗಳೂರಿನ ಯಲಹಂಕ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಾಸಿನ್, ಇಮ್ರಾನ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ., OLX ನಲ್ಲಿ ಕಾರು-ಬೈಕ್ ಗಳನ್ನು ನೋಡುವ ಆರೋಪಿಗಳು,

ವಾಹನ ಪಾಸಂದಾಯ್ತು ಅಂದ್ರೆ ಮನೆಗೆ ಹುಡುಕಿಕೊಂಡು ಬರುತ್ತಿದ್ದರು. ಬಳಿಕ ಟೆಸ್ಟ್ ಡ್ರೈವ್ ಮಾಡ್ತೀವಿ ಅಂತ ಗಾಡಿಯ ಕೀ ಪಡೆದು, ಗಾಡಿ ಸಮೇತ ಎಸ್ಕೇಪ್ ಆಗುತ್ತಿದ್ದರು. ಈ ಸಂಬಂಧ ದೂರು ದಾಖಲಿಸಿ ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಇನ್ನೂ ಆರೋಪಿಗಳಿಂದ 18 ಬೈಕ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಯಲಹಂಕ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


Spread the love

By admin