ನಟಿ ಸಮಂತಾ ರುತ್ ಪ್ರಭು ಅವರೊಂದಿಗೆ ವಿಚ್ಛೇದನ ಪಡೆದ ಬಳಿಕ ನಟಿ ಶೋಭಿತಾ ಧುಲಿಪಾಲ ಅವರೊಂದಿಗೆ ತೆಲುಗು ಸೂಪರ್ಸ್ಟಾರ್ ನಾಗ ಚೈತನ್ಯ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನುವ ವದಂತಿ ಹಲವು ದಿನಗಳಿಂದ ಕೇಳಿಬರುತ್ತಿದೆ.
ಅವರಿಬ್ಬರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಖತ್ ಸೌಂಡ್ ಮಾಡುತ್ತಿವೆ. ಆದರೆ, ಈ ಬಗ್ಗೆ ನಾಗ ಚೈತನ್ಯ ಆಗಲಿ ಅಥವಾ ಶೋಭಿತಾ ಅವರಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇದೇ ವಿಚಾರವಾಗಿ ಸೌತ್ ನಟ ನಾಗ ಚೈತನ್ಯ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ನಟ ನವೆಂಬರ್ 23 ರಂದು ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ನಟನಿಗೆ ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರು ಶುಭಕೋರಿ ತಮ್ಮ ಪ್ರೀತಿ ವ್ಯಕ್ತಪಡಿಸಿದರು. ಇದೀಗ ನಾಗ ಚೈತನ್ಯ ಮತ್ತು ಶೋಭಿತಾ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.
ನಾಗ ಚೈತನ್ಯ ತಮ್ಮ ಹುಟ್ಟುಹಬ್ಬವನ್ನು ವಿದೇಶದಲ್ಲಿ ವದಂತಿಯ ಗೆಳತಿ ಶೋಭಿತಾ ಜೊತೆ ಆಚರಿಸಿಕೊಂಡಿದ್ದಾರೆ ಎಂಬ ಮಾತು ಸೋಷಿಯಲ್ ಮೀಡಿಯಾ ಬಳಕೆದಾರರಲ್ಲಿ ಕೇಳಿಬರುತ್ತಿದೆ. ಆದರೆ ಈ ಚಿತ್ರದ ಅಸಲಿಯತ್ತೇ ಬೇರೆ.