Spread the love

ಗಾಂಧಿನಗರ: ದೇಶದಲ್ಲೇ ನೀವು ಅಪಖ್ಯಾತಿ ಹೊಂದಿದ್ದೀರಿ. ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿ ದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ ಕೇಂದ್ರ ಸಚಿವ ಅಮಿತ್ ಶಾ  ಕಾಂಗ್ರೆಸ್ ವಿರುದ್ಧ ಸತತವಾಗಿ ಹರಿಹಾಯುತ್ತಿದ್ದಾರೆ. ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ `2002ರಲ್ಲಿ ಹಿಂಸಾಚಾರದಲ್ಲಿ ತೊಡಗಿದ್ದ ಶಕ್ತಿಗಳಿಗೆ ಬಿಜೆಪಿ (BJP) ತಕ್ಕ ಪಾಠ ಕಲಿಸಿತು’ ಎಂದಿದ್ದ ಶಾ ಹೇಳಿಕೆ ವಿರುದ್ಧ ಓವೈಸಿ ಕಿಡಿಕಾರಿದ್ದಾರೆ.

ಗುಜರಾತಿನ ಜುಹಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಅಮಿತ್ ಶಾ ಅವರೇ ನಮಗೆ ಏನು ಪಾಠ ಕಲಿಸಿದ್ದೀರಿ? ಬಿಲ್ಕಿಸ್‌ನ ಅತ್ಯಾಚಾರಿಗಳನ್ನು ಬಿಡುಗಡೆ ಮಾಡೋದು ಪಾಠವೇ? ಬಿಲ್ಕಿಸ್‌ನ 3 ವರ್ಷದ ಮಗಳನ್ನು ಕಣ್ಣೆದುರೇ ಹೊಡೆದು ಕೊಂದವರನ್ನು ಬಿಡುಗಡೆ ಮಾಡುವುದು ಪಾಠವೇ? ಎಹ್ಸಾನ್ ಜಾಫ್ರಿ ಕೊಲ್ಲುವಂತಹ ಪಾಠ ಕಲಿಸಿದ್ದೀರಿ, ಇವೆಲ್ಲವೂ ಪಾಠವೇ? ಇಡೀ ದೇಶದಲ್ಲಿ ನೀವು ಅಪಖ್ಯಾತಿ ಹೊಂದಿದ್ದೀರಿ. ದೆಹಲಿಯಲ್ಲಿ ಕೋಮುಗಲಭೆಗಳು ನಡೆಯುತ್ತಿವೆ. ನೀವು ಯಾವ ಪಾಠ ಕಲಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ.


Spread the love