Spread the love

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ವಿಸ್ತರಿತ ಯೋಜನೆ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ. ಯಲಹಂಕದಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಬರುವ ವಾಹನಗಳು ಹೆಚ್ಚಾಗಿರುವುದರಿಂದ ಹೆಬ್ಬಾಳ ಮೇಲ್ಸೇತುವೆ ಸುತ್ತಮುತ್ತ ಸಂಚಾರ ದಟ್ಟಣೆ ಹೆಚ್ಚಾಗಿ ತೊಂದರೆ ಉಂಟಾಗುತ್ತಿದೆ.

ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಕಡೆಯಿಂದ ನಗರದ ಕಡೆಗೆ ಇರುವ ಮೇಲ್ಸೇತುವೆ ಜೊತೆಗೆ ಇನ್ನೆರಡು ಪಥಗಳನ್ನು ನಿರ್ಮಿಸಲಾಗುತ್ತದೆ ಎಂದರು. ಈ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದು, ಕೂಡಲೇ ಕಾಮಗಾರಿಯನ್ನು ಆರಂಭಿಸುವಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ಸದ್ಯದಲ್ಲೇ ಆರಂಭಿಸಲಾಗುವುದು ಎಂದು ತಿಳಿಸಿದರು.


Spread the love

By admin