Spread the love

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಆಗ್ರಹಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು ಈ ಹಗರಣದಲ್ಲಿ ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಮುಖ್ಯಮಂತ್ರಿಗಳ ಪಾತ್ರ ಪ್ರಮುಖವಾಗಿದೆ. ಹೀಗಾಗಿ ನಿಷ್ಪಕ್ಷಪಾತ ಮತ್ತು ನ್ಯಾಯಯುತ ತನಿಖೆಗೆ ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕು.

ಸಂಗ್ರಹಿಸಲಾದ ದತ್ತಾಂಶವನ್ನು ಖಾಸಗಿ ಆಯಪ್ಗೆ ಅಪ್ಲೋಡ್ ಮಾಡಲಾಗಿದೆ. ಈ ಮೂಲಕ ದತ್ತಾಂಶ ಅಕ್ರಮವಾಗಿ ಮಾರಾಟವಾಗಿದೆ ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ವತಿಯಿಂದ ನೀಡಲಾದ ದೂರಿನ ಮೇಲೆ ಚುನಾವಣಾ ಆಯೋಗ ತ್ವರಿತ ಕ್ರಮ ಕೈಗೊಂಡಿರುವುದನ್ನು ಸ್ವಾಗತಿಸುತ್ತೇವೆ. ಆದರೆ ತನಿಖೆಯನ್ನು ಕೇವಲ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ..


Spread the love