ಭೋಪಾಲ್: ಕಾಂಗ್ರೆಸ್‍ನ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶಕ್ಕೆ ತಲುಪಿದ್ದು, ಸಂಸದ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಜೊತೆ ಸೇರಿ ನರ್ಮದಾ ನದಿಗೆ ಆರತಿ ಬೆಳಗಿದ್ದಾರೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಬ್ರಹ್ಮಪುರಿ ಘಾಟ್‍ನಲ್ಲಿರುವ ನರ್ಮದಾ ನದಿಗೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಆರತಿ ಬೆಳಗಿ ಬಳಿಕ ಬೆಟ್ಟದ ಮೇಲಿರುವ ಪ್ರಸಿದ್ಧ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಇವರಿಗೆ ಕಾಂಗ್ರೆಸ್ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್,
ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಮತ್ತು ಅವರ ಮಗ ರೈಹಾನ್ ವಾದ್ರಾ ಸಾಥ್ ನೀಡಿದರು. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಭಾರತ್ ಜೋಡೋ ಖಾತೆಯಿಂದ ಪೋಸ್ಟ್ ಮಾಡಲಾಗಿದ್ದು, ದೇಶದಲ್ಲಿ ಶಾಂತಿ ಮತ್ತು ಏಕತೆ ನೆಲೆಸಲಿ. ತಾಯಿ ನರ್ಮದಾ ಎಲ್ಲರಿಗೂ ಶುಭವನ್ನು ತರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಹಲವು ಫೋಟೋಗಳನ್ನು ಪೋಸ್ಟ್ ಮಾಡಿದೆ.