Spread the love

ಬೆಂಗಳೂರು: ಗೃಹ ರಕ್ಷಕ ದಳದ ಸಿಬ್ಬಂದಿಯ ವಿರುದ್ಧ ಆರೋಪ ಕೇಳಿ ಬಂದಾಗ ಪೂರ್ವಭಾವಿ ನೋಟಿಸ್ ನೀಡದೆಯೂ ಅಮಾನತು ಆದೇಶ ಹೊರಡಿಸಬಹುದು ಎಂದು ಬೆಂಗಳೂರಿನ ಹೈಕೋರ್ಟ್ ಪೀಠ ತಿಳಿಸಿದೆ. ನಗರದ ಲಗ್ಗೆರೆಯ ಡಿ.ಇ ಕೆಂಪಾಮಣಿ ಎಂಬುವರನ್ನು ನೋಟಿಸ್ ನೀಡದೇ ಅಮಾನತುಗೊಳಿಸಿದ ಆದೇಶ ರದ್ದು ಕೋರಿ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಸ್.ಜಿ ಪಂಡಿತ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಅಲ್ಲದೇ, ಗೃಹರಕ್ಷಕ ಸಿಬ್ಬಂದಿ ಶಿಸ್ತಿಗೆ ಹೆಸರಾದ ಪಡೆ, ಅಂತಹ ಪಡೆಯ ಸಿಬ್ಬಂದಿಯ ಅಶಿಸ್ತನ್ನು ಸಹಿಸಲಾಗದು. ಜತೆಗೆ ಅಮಾನತು ಎನ್ನುವುದು ಶಿಕ್ಷೆಯಲ್ಲ,

ತಾತ್ಕಾಲಿಕ ಕ್ರಮ, ತನಿಖೆ ಎದುರಿಸಬೇಕಾಗುತ್ತದೆ. ಹಾಗಾಗಿ ಡಿಜಿಪಿ ಹೊರಡಿಸಿರುವ ಅಮಾನತು ಆದೇಶ ಸಮಂಜಸವಾಗಿದೆ. ಅದರಲ್ಲಿ ಹಸ್ತಕ್ಷೇಪ ಮಾಡಲಾಗದು ಎಂದು ಪೀಠ ತಿಳಿಸಿದೆ. ಕರ್ನಾಟಕ ಗೃಹ ರಕ್ಷಕ ಸಿಬ್ಬಂದಿ ನಿಯಮ 1963ರ ಸೆಕ್ಷನ್ 14ಬಿ ಅಡಿ ಗೃಹರಕ್ಷಕ ದಳದ ಕಮಾಂಡೆಂಟ್ ಅಥವಾ ಕಮಾಂಡ್ ಜನರಲ್ ಗೆ ಹೋಮ್ ಗಾರ್ಡ್‌ಗಳನ್ನು ಅಮಾನತುಗೊಳಿಸುವ ಅಧಿಕಾರ ಇದೆ. ಹಾಗಾಗಿ ಅವರು ಆ ಅಧಿಕಾರ ಬಳಸಿಯೇ ಈ ಆದೇಶ ನೀಡಿದ್ದಾರೆ. ಅಮಾನತು ಆದೇಶಕ್ಕೂ ಮುನ್ನ ನೋಟಿಸ್ ನೀಡುವ ಅಗತ್ಯವಿಲ್ಲ ಎಂದು ಪೀಠ ತನ್ನ ಆದೇಶದಲ್ಲಿ ವಿವರಿಸಿದೆ.


Spread the love

By admin