ಮುಂಬೈ: ತಮ್ಮ ಹೇಳಿಕೆಗಳಿಂದ ಆಗಾಗ ಸುದ್ದಿಯಾಗುವ ಪತಂಜಲಿ ಮುಖ್ಯಸ್ಥ, ಯೋಗ ಗುರು ಬಾಬಾ ರಾಮ್ ದೇವ್ ಇದೀಗ ಮಹಿಳೆಯರ ಉಡುಪುಗಳ ಕುರಿತಾಗಿ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದೆ. ಮಹಾರಾಷ್ಟ್ರದ ಥಾಣೆಯಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ರಾಮ್ ದೇವ್ ಬಾಬಾ, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ.
ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಬಾಬಾ ರಾಮದೇವ್ ಹೇಳಿದ್ದಾರೆ.
ರಾಮ್‌ದೇವ್ ಅವರು ಈ ಹೇಳಿಕೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಸಮ್ಮುಖ ದಲ್ಲಿಯೇ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಸಂಸದ ಶ್ರೀಕಾಂತ್ ಶಿಂಧೆ ಕೂಡಾ ಭಾಗಿಯಾಗಿದ್ದರು. ವರದಿಗಳ ಪ್ರಕಾರ ಮಹಿಳೆಯರಿಗಾಗಿ ಯೋಗ ತರಬೇತಿ ಕಾರ್ಯಕ್ರಮ ನಡೆಸಲಾಗಿತ್ತು. ಇದಾದ ಬಳಿಕ ಸಮಾವೇಶ ಆಯೋಜಿಸಲಾಗಿತ್ತು. ಯೋಗ ತರಬೇತಿಯಲ್ಲಿ ಭಾಗಿಯಾಗಿದ್ದ ಮಹಿಳೆಯರು ಸಮಾವೇಶಕ್ಕಾಗಿ ಸೀರೆಯನ್ನೂ ತಂದಿದ್ದರು. ಆದರೆ ಯೋಗ ತರಬೇತಿ ಮುಗಿದ ತಕ್ಷಣವೇ ಸಭೆ ಆರಂಭವಾಗಿತ್ತು. ಇದರಿಂದ ಮಹಿಳೆಯರಿಗೆ ಸೀರೆ ಉಟ್ಟುಕೊಳ್ಳಲು ಸಮಯ ಸಿಕ್ಕಿರಲಿಲ್ಲ.