Spread the love

ಬೆಂಗಳೂರು: ಒಕ್ಕಲಿಗ ಸೇರಿದಂತೆ ಹಲವು ಸಮುದಾಯಗಳಿಂದ ಮೀಸಲಾತಿ ಬೇಡಿಕೆ ಇದೆ. ಎಲ್ಲರ ಬೇಡಿಕೆಯನ್ನು ಗಮನಕ್ಕೆ ತೆಗೆದುಕೊಂಡು ಕ್ರಮ ವಹಿಸುವ ಕೆಲಸ ಸರ್ಕಾರದಿಂದ ಆಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್​ ನಾರಾಯಣ್​ ಹೇಳಿದ್ದಾರೆ. ಮಲ್ಲೇಶ್ವರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೌಡಿಶೀಟರ್ ಸೈಲೆಂಟ್ ಸುನೀಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದು ಮತ್ತು ನಾಗಮಂಗಲದ ಫೈಟರ್ ರವಿ ಬಿಜೆಪಿ ಸೇರ್ಪಡೆ ವಿಚಾರ ಚರ್ಚೆಯಾಗುತ್ತಿದೆ. ಕಾನೂನು ಎಲ್ಲರಿಗೂ ಅನ್ವಯ ಆಗುತ್ತದೆ. ಕಾನೂನಿನಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಅವರು ತಪ್ಪಿತಸ್ಥರೇ.

ಸಮಾಜದಲ್ಲಿ ಎಲ್ಲರಿಗೂ ಒಳ್ಳೆಯ ರೀತಿಯಲ್ಲಿ ಬದುಕಿ ಬಾಳಲು ಅವಕಾಶ ಇದೆ. ಅದಕ್ಕೆ ಯಾವುದೋ ರೀತಿ ನಾಮಕರಣ ಮಾಡುವುದು ತಪ್ಪು ಎಂದರು. ಇನ್ನೂ ಒಕ್ಕಲಿಗ ಮೀಸಲಾತಿ ಹೆಚ್ಚಳ ಸೇರಿದಂತೆ ಹಲವು ಸಮುದಾಯಗಳ ಮೀಸಲಾತಿ ಬೇಡಿಕೆ ಇದೆ. ಎಲ್ಲರ ಬೇಡಿಕೆಯನ್ನೂ ಗಮನಕ್ಕೆ ತೆಗೆದುಕೊಂಡು ಕ್ರಮ ವಹಿಸುವ ಕೆಲಸ ಸರ್ಕಾರದಿಂದ ಆಗುತ್ತದೆ. ಇಲ್ಲಿ ನನ್ನ ವೈಯಕ್ತಿಕ ಪ್ರಶ್ನೆ ಬರುವುದಿಲ್ಲ. ಸರ್ಕಾರದಲ್ಲಿ, ಕಾನೂನಿನಲ್ಲಿ ಯಾವ ರೀತಿಯ ಅವಕಾಶಗಳಿವೆ ಎಂಬುದನ್ನು ನೋಡಿ ಕ್ರಮ ವಹಿಸುವ ಕೆಲಸ ಆಗುತ್ತದೆ. ಸರ್ಕಾರದಿಂದ ಜನರ ಭಾವನೆ ಮತ್ತು ಬೇಡಿಕೆಗಳನ್ನು ಯಾವ ರೀತಿ ಈಡೇರಿಸಲು ಸಾಧ್ಯವಿದೆಯೋ ಅದೆಲ್ಲವನ್ನೂ ಮಾಡೋಣ ಎಂದು ಸಚಿವರು ತಿಳಿಸಿದರು.


Spread the love