ಬೆಂಗಳೂರು: ರಾಜಕಾಲುವೆ ಒತ್ತುವರಿ ಸಮೀಕ್ಷೆ ನಡೆಸಿ ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಬೆಂಗಳೂರಿನ ಅಪಾರ್ಟ್‌ಮೆಂಟ್ ನಿವಾಸಿಗಳ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಶಿಲ್ಪಿತ ಸ್ಲೆಂಡರ್ ಅನೆಕ್ಸ್ ಅಪಾರ್ಟ್‌ಮೆಂಟ್‌ನ 23 ಫ್ಲಾಟುದಾರರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ, ಅರ್ಜಿದಾರರೆಲ್ಲ ಅಪಾರ್ಟ್‌ಮೆಂಟ್ ನಿವಾಸಿಗಳಾಗಿದ್ದು,
ಬಿಬಿಎಂಪಿ ತೆರವು ಕಾರ್ಯಾಚರಣೆಗೆ ಅಡ್ಡಿ ಮಾಡಿರುವುದು ದೃಢವಾದ ಹಿನ್ನೆಲೆ ಅರ್ಜಿಯನ್ನು ವಜಾ ಮಾಡಿದೆ. ಫ್ಲಾಟ್‌ಗಳ ಮಾಲೀ ಕರಾದವರು ಅಪಾರ್ಟ್‌ಮೆಂಟ್‌ನಲ್ಲಿರಬೇಕು. ಆದರೆ, ಸರ್ಕಾರಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುವ ಉದ್ದೇಶದಿಂದ ಅರ್ಜಿದಾರರು ಒಟ್ಟಾಗಿ ಕೈ ಜೋಡಿಸಿದ್ದಾರೆ. ಇದು ಐಪಿಸಿ ಸೆಕ್ಷನ್ 149 ಅಕ್ರಮ ಕೂಟ ರಚನೆ ಮತ್ತು ಸೆಕ್ಷನ್ 143 ಸರ್ಕಾರಿ ಅಧಿಕಾರಿಯ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಅಡಿಯಲ್ಲಿ ಅಪರಾಧವಾಗಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.