Spread the love

ಮಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಎನ್‌ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ ಮಾಡಲಾಗುವುದು.

ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಎನ್‌ಐಎ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಿದ್ದು, ಇಂದಿನಿಂದ ಎನ್‌ಐಎ ಅಧಿಕಾರಿಗಳು ತನಿಖೆ ಆರಂಭಿಸಲಿದ್ದಾರೆ.

 

ಪೊಲೀಸರು ಈಗಾಗಲೇ ಶಾರಿಕ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಖುದ್ದಾಗಿ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ತನಿಖಾ ತಂಡದಿಂದ ಶಾರಿಕ್ ಹೇಳಿಕೆ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ತನಿಖಾಧಿಕಾರಿ ಪಿ.ಎ. ಹೆಗಡೆ ಎದುರು ಆರೋಪಿ ಹೇಳಿಕೆ ದಾಖಲಿಸಲಾಗಿದೆ. ಇಂದಿನಿಂದ ಎನ್‌ಐಎ ಅಧಿಕಾರಿಗಳು ಪ್ರತ್ಯೇಕ ಹೇಳಿಕೆ ಪಡೆಯಲಿದ್ದಾರೆ.


Spread the love