ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಆಪ್ತರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರು ಕ್ರಿಯೇಟಿವ್ ಪೋಸ್ಟ್ ಮೂಲಕ ತಮ್ಮ ಪ್ರೀತಿಯ ವಿಷ್ಯ ತಿಳಿಸಿದ್ದರು. ಇದೀಗ ಈ ಜೊಡಿಗಳು ಎಂಗೇಜ್‌ಮೆಂಟ್ ಮಾಡಿಕೊಂಡಿರುವ ಫೋಟೋಗಳು ವೈರಲ್ ಆಗಿದೆ.
ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ ಹರಿಪ್ರಿಯಾ ಮತ್ತು ವಸಿಷ್ಠ ಜೋಡಿಯ ಪ್ರೇಮ ಕಹಾನಿ. ಇವರಿಬ್ಬರ ಲವ್ ಸ್ಟೋರಿ ವಿಚಾರ ಇದೀಗ ಗುಟ್ಟಾಗಿ ಉಳಿದಿಲ್ಲ. ತಮ್ಮ ಸಂಬಂಧದ ಬಗ್ಗೆ ಈ ಜೋಡಿ ಅಧಿಕೃತವಾಗಿ ತಿಳಿಸದೇ ಇದ್ದರು. ಸದ್ಯ ಪರೋಕ್ಷವಾಗಿ ತಾವು ಎಂಗೇಜ್ ಆಗಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದರು. ಇದೀಗ ಹರಿಪ್ರಿಯಾ, ವಸಿಷ್ಠ ನಿಶ್ಚಿತಾರ್ಥದ ಫೋಟೋ ಎಲ್ಲೆಡೆ ಸದ್ದು ಮಾಡ್ತಿದೆ. ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ರಿಂಗ್ ಬದಲಿಸಿಕೊಂಡಿದ್ದಾರೆ. ಈ ಮೂಲಕ ತಮ್ಮ ಸಂಬಂಧಕ್ಕೆ ಅಧಿಕೃತ ಮುದ್ರೆ ಒತ್ತಿದ್ದಾರೆ.
ಸಿಂಹದ ಮಡಿಲಲ್ಲಿ ಮಲಗಿರುವ ಮಗುವಿನ ಫೋಟೋವನ್ನ ಜೊತೆ `ಚಿನ್ನ ತೋಳಿನಲ್ಲಿ ಕಂದ ನಾನು’ ಎಂದು ಕ್ರಿಯೇಟಿವ್ ಆಗಿ ಮದುವೆ ಬಗೆಗಿನ ಸುದ್ದಿ ಬಗ್ಗೆ ಹರಿಪ್ರಿಯಾ, ಪೋಸ್ಟ್ ಮೂಲಕ ಖಚಿತಪಡಿಸಿದ್ದರು. ಅದೇ ರೀತಿಯ ಪೋಸ್ಟ್ ವಸಿಷ್ಠ ಕೂಡ ಶೇರ್ ಮಾಡಿ, ಎಂದು ನಿನ್ನ ನೆರಳಾಗಿ ಕಾಯುವೆ ಅಂತಾ ನಟ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಎಂಗೇಜ್‌ಮೆಂಟ್ ವಿಷ್ಯಕ್ಕೆ ಸ್ಪಷ್ಟನೆ ನೀಡಿದ್ದರು. ಇದೀಗ ಈ ಜೋಡಿಯ ನಿಶ್ಚಿತಾರ್ಥದ ಫೋಟೋ ಹೊರ ಬಿದ್ದಿದ್ದು ಅಧಿಕೃತವಾಗಿ ಮಾಹಿತಿ ಸಿಕ್ಕಿದೆ.