ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು. ಸೌಜನ್ಯದ ಭೇಟಿ ಎಂದು ಹೇಳಲಾಗುತ್ತಿದ್ದರೂ ಪ್ರಸಕ್ತ ರಾಜಕೀಯ ವಿದ್ಯಮಾನ, ರೌಡಿ ಶೀಟರ್ ಸೇರ್ಪಡೆಯ ಗದ್ದಲದ ಮಧ್ಯೆ ಭೇಟಿ ಕುತೂಹಲ ಕೆರಳಿಸಿದೆ.
ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾಗಿರುವ ಯಡಿಯೂರಪ್ಪ ಭೇಟಿಯ ವೇಳೆ ಕಟೀಲ್ ಕೆಲ ವಿಚಾರಗಳನ್ನು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಪಕ್ಷ ಸಂಘಟನೆ ಜತೆಗೆ ರೌಡಿ ಶೀಟರ್ ಪಕ್ಷ ಸೇರ್ಪಡೆ ಸಂಬಂಧ ಉಂಟಾಗಿರುವ ವಿವಾದ ತಣಿಸುವ ಸಂಬಂಧವೂ ಮಾಜಿ ಸಿಎಂ ಜತೆ ಸಲಹೆ ಸೂಚನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳ ಕಾಲ ನಳಿನ್ ಕುಮಾರ್ ಕಟೀಲ್ ಅನಾರೊಗ್ಯ ಕಾರಣ ಆಸ್ಪತ್ರೆ ದಾಖಲಾಗಿದ್ದರು. ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.