ಕಲಬುರಗಿ: ಶಾಸಕ ಪ್ರಿಯಾಂಕ್ ಖರ್ಗೆ ಬಲಗೈ ಬಂಟ ಮಹಾನಗರ ಪಾಲಿಕೆ ಸದಸ್ಯ ರಾಜು ಕಪನೂರ್ ಅವರನ್ನು ಯಡ್ರಾಮಿ ಪೋಲಿಸರು ವಿದೇಶಿ ಕಂಟ್ರಿಮೆಡ್ ಪಿಸ್ತೂಲ್ ಖರೀದಿ ಆರೋಪದ ಮೇಲೆ ಬಂಧಿಸಿದ್ದಾರೆ. ಯಡ್ರಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುಲಿಂಗಪ್ಪ ಎಂಬಾತನಿಂದ ರಾಜು ಕಪನೂರ್ ಸೆಪ್ಟೆಂಬರ್ ತಿಂಗಳಲ್ಲಿ ಎರಡು ಕಂಟ್ರಿಮೆಡ್ ಪಿಸ್ತೂಲ್, ಮತ್ತು 30 ಜೀವಂತ ಗುಂಡುಗಳು ಖರೀದಿ ಮಾಡಿದ್ದರು ಎನ್ನಲಾಗಿದೆ. ಈ ಕುರಿತು ಗುರುಲಿಂಗಪ್ಪ ಪೋಲಿಸರ ಮುಂದೆ ನೀಡಿದ್ದ ವೀಡಿಯೋ ಹೇಳಿಕೆಯಲ್ಲಿ ಕಪನೂರ್ ಹೆಸರು ಉಲ್ಲೇಖಿಸಿದ್ದ. ಇದರಿಂದ ಪೋಲಿಸರು ರಾಜು ಕಪನೂರ್‌ಗೆ ಎರಡು ಬಾರಿ ನೋಟಿಸ್ ನೀಡಿದ್ದರು.
ಆದರೆ ನೋಟಿಸ್‌ಗೆ ಕ್ಯಾರೇ ಎನ್ನದ ರಾಜು ಕಪನೂರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನನ್ನನ್ನು ಕೊಲೆ ಮಾಡಲು ರಾಜು ಕಪನೂರ್ ಗನ್ ಖರೀದಿ ಮಾಡಿದ್ದ ಎಂದು ಶುಕ್ರವಾರ ಬಿಜೆಪಿ (BJP) ಮುಖಂಡ, ಉದ್ಯಮಿ ಮಣಿಕಂಠ ರಾಠೋಡ ಪತ್ರಿಕಾಗೋಷ್ಠಿಯಲ್ಲಿ ವೀಡಿಯೋ ಬಿಡುಗಡೆ ಮಾಡಿದ್ದರು. ಇದೀಗ ವೀಡಿಯೋ ರಿಲೀಸ್ ಆದ ಬಳಿಕ ರಾಜು ಕಪನೂರ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.