ಅಹಮದಾಬಾದ್: ನಾನು ಯಾವುದೇ ವ್ಯಕ್ತಿಯ ಬಗ್ಗೆ ಟೀಕಿಸುವುದಾಗಲಿ, ವೈಯಕ್ತಿಕವಾಗಿ ಟಾರ್ಗೆಟ್ ಮಾಡುವುದಾಗಲಿ ಮಾಡುವುದಿಲ್ಲ. ರಾಜಕಾರಣವು ರಾಜಕೀಯ ವ್ಯಕ್ತಿಗಳ ಮೇಲಲ್ಲ, ಅವರ ನೀತಿಗಳ ವಿರುದ್ಧ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ ಎಂದ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಗುಜರಾತ್ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ತನ್ನ ವಿರುದ್ಧದ ಟೀಕೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದರು.ಬಿಜೆಪಿಯ ರಾಜಕೀಯವು ಸಾಮಾನ್ಯವಾಗಿ ಪ್ರಜಾಪ್ರಭುತ್ವದ ಮನೋಭಾವವನ್ನು ಹೊಂದಿರುವುದಿಲ್ಲ. ಎಲ್ಲಾ ಹಂತದ ಚುನಾವಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಶೈಲಿಯ ಬಗ್ಗೆ ನಾನು ಹಲವಾರು ಉದಾಹರಣೆಗಳನ್ನು ನೀಡಿದ್ದೇನೆ. ಆದರೆ ಅವರು ಚುನಾವಣಾ ಲಾಭಕ್ಕಾಗಿ ನನ್ನ ಹೇಳಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.