ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ಮೊದಲ ಬಾರಿಗೆ ಗುರು ದತ್ತಾತ್ರೇಯ ಸ್ವಾಮಿಗೆ ಅರ್ಚಕರು ಪೂಜೆ ನೆರವೇರಿಸಿದ್ದಾರೆ.
ಚಿಕ್ಕಮಗಳೂರಿನ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಹಿಂದೂ ಅರ್ಚಕರು ಪೂಜೆ ನೆರವೇರಿಸಿದ್ದಾರೆ.
ದತ್ತ ಪಾದುಕೆಗೆ ಹಿಂದೂ ಅರ್ಚಕರಿಂದ ಪೂಜೆ ಸಲ್ಲಿಸಲಾಗಿದೆ.
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಎರಡು ದಿನಗಳ ಹಿಂದೆ ಸರ್ಕಾರ ಇಬ್ಬರು ಅರ್ಚಕರನ್ನು ನೇಮಕ ಮಾಡಿತ್ತು.
ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಮುಜಾವರ್ ಪೂಜಾ ವಿಧಿ ವಿಧಾನ ನಡೆಸುತ್ತಿದ್ದರು. ಹಿಂದೂಪರ ಸಂಘಟನೆಗಳ ಬಹುದಿನಗಳ ಬೇಡಿಕೆಯಂತೆ ಸರ್ಕಾರ ಮೊದಲ ಬಾರಿಗೆ ಅರ್ಚಕರನ್ನು ನೇಮಕ ಮಾಡಿತ್ತು.