Spread the love

ಹಮದಾಬಾದ್: ದೇಶಾದ್ಯಂತ ಗಮನ ಸೆಳೆಯುತ್ತಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬರದಿಂದ ಸಾಗಿದ್ದು, ಕ್ಷಣ ಕ್ಷಣಕ್ಕೂ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ.

ಸಧ್ಯದ ಮಾಹಿತಿ ಪ್ರಕಾರ ಗುಜರಾತ್ ನಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದರೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.

ಆದರೆ ಎರಡೂ ರಾಜ್ಯಗಳಲ್ಲಿಯೂ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬುದು ಚುನಾವಣೋತ್ತರ ಸಮೀಕ್ಷೆ.

ಗುಜರಾತ್ ನಲ್ಲಿ 144 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದರೆ, 8 ಕ್ಷೇತ್ರಗಳಲ್ಲಿ ಆಪ್ ಹಾಗೂ 5 ಕ್ಷೇತ್ರಗಳಲ್ಲಿ ಇತರ ಅಭ್ಯರ್ಥಿಗಳು ಮುನ್ನಡೆಯಲಿದ್ದಾರೆ.

ಇನ್ನು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ 34 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 31 ಕ್ಷೇತ್ರಗಳಲ್ಲಿ ಹಾಗೂ ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.


Spread the love