Spread the love

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಪುರಸಭೆಯ ಈಜುಕೊಳದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಇವರೆಲ್ಲರೂ 8 ರಿಂದ 14 ವರ್ಷ ವಯಸ್ಸಿನವರು ಎಂದು ಈಜುಕೊಳ ಅಕಾಡೆಮಿ ಮೇಲ್ವಿಚಾರಕರು ತಿಳಿಸಿದ್ದಾರೆ.

ವಿಜಯವಾಡ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ಮಕ್ಕಳು ಈಜುಕೊಳದಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಕೊಳದಲ್ಲಿ ಕ್ಲೋರಿನ್ ಸೋರಿಕೆಯಿಂದಾಗಿ ಮಕ್ಕಳು ತೀವ್ರ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆಯ ಉಪಕರಣಗಳು ಮತ್ತು ಹಳೆಯ ಗ್ಯಾಸ್ ಸಿಲಿಂಡರ್‌ನಿಂದಾಗಿ ಅನಿಲ ಸೋರಿಕೆ ಸಂಭವಿಸಿದೆ. ನಂತರ ಅದನ್ನು ಸರಿಪಡಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಈಗ ಸ್ಥಿರವಾಗಿದ್ದಾರೆ ಎಂದು ಅವರು ಹೇಳಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.


Spread the love