Spread the love

ಚೆನ್ನೈ: ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಸಂಪುಟಕ್ಕೆ ಸೇರಲಿದ್ದಾರೆ. ಸಂಪುಟ ಪುನಾರಚನೆಯ ಸಮಯದಲ್ಲಿ ತಮ್ಮ ತಂದೆಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯುವ ಕುರಿತಾದ ವದಂತಿಗಳ ಬಗ್ಗೆ ಮಾತನಾಡಿದ ಉದಯನಿಧಿ ಅವರು, ವದಂತಿಗಳನ್ನು ಖಚಿತಪಡಿಸಲು ಅಥವಾ ನಿರಾಕರಿಸದೇ ಅದು ಏನೇ ಇರಲಿ, ಮುಖ್ಯಮಂತ್ರಿ ಅವರು ಘೋಷಣೆ ಮಾಡುತ್ತಾರೆ,

ನಾನು ಅದರ ಬಗ್ಗೆ ಪ್ರತಿಕ್ರಿಯಿಸಲಾರೆ ಎಂದು ಹೇಳಿದ್ದಾರೆ. ಶೀಘ್ರದಲ್ಲೇ ಸಂಪುಟ ಪುನಾರಚನೆಯ ಸಮಯದಲ್ಲಿ ಉದಯನಿಧಿ ಅವರನ್ನು ಸಚಿವರನ್ನಾಗಿ ಮಾಡಲಾಗುವುದು. ಮೂಲಗಳ ಪ್ರಕಾರ, ಡಿಸೆಂಬರ್ 14 ರಂದು ನಡೆಯಲಿರುವ ಸಿಎಂ ಸ್ಟಾಲಿನ್ ಅವರ ಸಂಪುಟ ಪುನಾರಚನೆಯಲ್ಲಿ ಉದಯನಿಧಿ ಅವರಿಗೆ ಕ್ರೀಡೆ ಮತ್ತು ಯುವ ಕಲ್ಯಾಣ ಖಾತೆಯನ್ನು ನೀಡಲಾಗುವುದು ಎನ್ನಲಾಗಿದೆ.


Spread the love