ಬೆಂಗಳೂರು: ಅನಧಿಕೃತವಾಗಿ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕಾಫಿ ಬೆಳೆಗಾರರಿಗೆ ಸರ್ಕಾರಿ ಜಮೀನುಗಳನ್ನು ದೀರ್ಘಾವಧಿಗೆ ಗುತ್ತಿಗೆ ನೀಡಲು ಅಗತ್ಯ ಪ್ರಕ್ರಿಯೆ ಶೀಘ್ರವೇ ಅಂತಿಮಗೊಳಿಸುವುದಾಗಿ ಕಂದಾಯ ಸಚಿವ ಆರ್.
ಅಶೋಕ್ ತಿಳಿಸಿದ್ದಾರೆ.
ಬುಧವಾರ ಕಾಫಿ ಬೆಳೆಗಾರರ ನಿಯೋಗದೊಂದಿಗೆ ಸಭೆ ನಡೆಸಿದ ಸಚಿವರು ನಂತರ ಮಾತನಾಡಿ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾಫಿ ಎಸ್ಟೇಟ್ ಗಳಿಗೆ ಹೊಂದಿಕೊಂಡಿರುವ ಸರ್ಕಾರಿ ಜಮೀನುಗಳಲ್ಲಿ ವರ್ಷಗಳಿಂದಲೂ ಸಾಗುವಳಿ ನಡೆಸಲಾಗುತ್ತಿದೆ. ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಸರ್ಕಾರಿ ಜಮೀನುಗಳನ್ನು ಕಾಫಿ ಬೆಳೆಗಾರರಿಗೆ ದೀರ್ಘಾವಧಿಗೆ ನೀಡಲು ಹಲವು ಬಾರಿ ಚರ್ಚೆ ನಡೆಸಿದ್ದು, ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.