Spread the love

ವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 200 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಅಲ್ಲದೇ ಕಳೆದ 24 ಗಂಟೆಯಲ್ಲಿ 5 ಜನರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ 530663 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3767 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44141017 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 59,327 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,98,82,753 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,17,735 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.


Spread the love