Spread the love

ಬೆಂಗಳೂರು: ಜೆಡಿಎಸ್ ಭದ್ರಕೋಟೆ ಒಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ನನಗೆ ಕಾಂಗ್ರೆಸ್-ಬಿಜೆಪಿ ಮನೆ ಬಾಗಿಲಿಗೆ ಹೋಗುವ ಸ್ಥಿತಿಯನ್ನು ಜನರು ತರವುದಿಲ್ಲ.

ಕಾಂಗ್ರೆಸ್ ಏನೇ ಮಾಡಿದರೂ ನಮ್ಮ ಭದ್ರಕೋಟೆ ಒಡೆಯಲು ಸಾಧ್ಯವಿಲ್ಲ. ಏನೇ ಕಾರ್ಯತಂತ್ರ, ಜಾತಿವಾರು ಸಭೆ-ಸಮಾವೇಶ ಮಾಡಿದರೂ ಅಸಾಧ್ಯ.

ಎರಡೂ ರಾಷ್ಟ್ರೀಯ ಪಕ್ಷಗಳನ್ನು ಈ ಬಾರಿ ಜನರು ದೂರ ಇಡುತ್ತಾರೆ ಎಂದು ಭವಿಷ್ಯ ನುಡಿದರು. ಇನ್ನೂ ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ‌ ಮಾಡುತ್ತಾರೆಯೇ ಎನ್ನುವ ಪ್ರಶ್ನೆಗೆ ಉತ್ತರ ನೀಡಿದ ಹೆಚ್​ಡಿಕೆ, ನಿಖಿಲ್ ಈಗಾಗಲೇ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಹೆಸರನ್ನು ಘೋಷಣೆ ಮಾಡುವುದಕ್ಕೆ ನನಗೆ ಯಾವುದೇ ಅಂಜಿಕೆ ಇಲ್ಲ. ನನಗೆ ನಿಖಿಲ್‌ ಅವರನ್ನು ಹೇಗೆ ದಡ ಸೇರಿಸೋದು ಎಂಬ ಚಿಂತೆ ಇಲ್ಲ. ನನಗೆ ಇರೋದು ನಾಡಿನ ಜನರ ಚಿಂತೆ ಎಂದು ಹೇಳಿದರು.


Spread the love