Spread the love

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಕಣಕ್ಕಿಳಿಯುವುದು ನಿಶ್ಚಿತವಾಗಿದೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ ಸ್ವತಃ ಈ ವಿಷಯ ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ತಮಗೆ ಕರೆ ಮಾಡಿ ಈ ವಿಷಯ ತಿಳಿಸಿರುವುದಾಗಿ ಹೇಳಿದ ಬಸವರಾಜ ಹೊರಟ್ಟಿ, ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದ ಸಂದರ್ಭದಲ್ಲಿ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಹೇಳಿದರು.

 

ಹಂಗಾಮಿ ಸಭಾಪತಿಯಾಗಿರುವ ರಘುನಾಥ್ ಮಲ್ಕಾಪುರೆ ಕೂಡಾ ಸಭಾಪತಿ ಸ್ಥಾನದ ಚುನಾವಣಾ ಆಕಾಂಕ್ಷಿಯಾಗಿದ್ದು, ಹೀಗಾಗಿ ಬಸವರಾಜ ಹೊರಟ್ಟಿ ಅವರಿಗೆ ಅವಕಾಶ ಸಿಗುತ್ತದೋ ಇಲ್ಲವೋ ಎಂಬ ಕುತೂಹಲ ಮನೆ ಮಾಡಿತ್ತು. ಇದೀಗ ಹೊರಟ್ಟಿ ಅವರಿಗೆ ಬಿಜೆಪಿ ಅವಕಾಶ ನೀಡಿದೆ ಎಂದು ಹೇಳಲಾಗಿದೆ.


Spread the love