Spread the love

ರಾಮನಗರ: ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ರಾಮನಗರದಿಂದ ಸ್ಪರ್ಧಿಸಲಿದ್ದಾರೆ.

ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿರುವ ತಾಯಿ ಅನಿತಾ ಕುಮಾರಸ್ವಾಮಿ ಅವರು ನಿಖಿಲ್ ಕುಮಾರ್ ಹೆಸರನ್ನು ಘೋಷಣೆ ಮಾಡಿದ್ದಾರೆ.

ಪಂಚರತ್ನ ರಥಯಾತ್ರೆಯಲ್ಲಿ ಅನಿತಾ ಕುಮಾರಸ್ವಾಮಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ರಾಮನಗರಕ್ಕೆ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿದ್ದಾರೆ. ನಿಖಿಲ್ ಹೆಸರು ಘೋಷಿಸುತ್ತಿದ್ದಂತೆ ಅಭಿಮಾನಿಗಳಲ್ಲಿ ಹರ್ಷೋದ್ಘಾರ ಮುಗಿಲು ಮುಟ್ಟಿದೆ. ಇದರೊಂದಿಗೆ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತವಾಗಿದೆ.


Spread the love