ವಿ. ಹರಿಕೃಷ್ಣ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾದ ಬೊಂಬೆ ಬೊಂಬೆ ಎಂಬ ಎರಡನೇ ಲಿರಿಕಲ್ ಸಾಂಗ್ ಇಂದು ಡಿ ಬೀಟ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ ಈ ಕುರಿತು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ instagram ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹೊಸಪೇಟೆಯಲ್ಲಿ ರಾತ್ರಿ 7 ಗಂಟೆಗೆ ಈ ಹಾಡನ್ನು ಲಾಂಚ್ ಮಾಡಲಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 55ನೇ ಚಿತ್ರ ಇದಾಗಿದ್ದು ಶೈಲಜಾ ನಾಗ್ ಹಾಗೂ ಬಿ ಸುರೇಶ್ ಬಂಡವಾಳ ಹೂಡಿದ್ದಾರೆ ವಿ. ಹರಿ ಕೃಷ್ಣ ನಿರ್ದೇಶಸುತ್ತಿರುವ ಈ ಸಿನಿಮಾದಲ್ಲಿ ದರ್ಶನ್ ಗೆ ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತರಾಮ್ ಅಭಿನಯಿಸಿದ್ದಾರೆ. 2021 ರಲ್ಲಿ ರಾಬರ್ಟ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ದರ್ಶನ್ ಇದೀಗ ಮತ್ತೊಮ್ಮೆ ತೆರೆಮೇಲೆ ಅಬ್ಬರಿಸಲು ಸಜ್ಜಾಗಿದ್ದಾರೆ.