Spread the love

ಬೆಳಗಾವಿ ಸುವರ್ಣಸೌಧದಲ್ಲಿ ಸಾವರ್ಕರ್​ ಫೋಟೋ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಅಸೆಂಬ್ಲಿ ಹಾಲ್​ನಲ್ಲಿ ಹಲವು ಮಹನೀಯರ ಫೋಟೋ ಅಳವಡಿಸಬೇಕಿದೆ. ಮಹರ್ಷಿ ವಾಲ್ಮೀಕಿ, ಬಸವಣ್ಣ, ಕನಕದಾಸ, ಶಿಶುನಾಳ ಶರೀಫ, ನೆಹರು.

ನಾರಾಯಣಗುರು,

ಡಾ.ಬಿ.ಆರ್​.ಅಂಬೇಡ್ಕರ್​​, ವಲ್ಲಭ ಬಾಯಿ ಪಟೇಲ್​, ಬಾಬು ಜಗಜೀವನ ರಾಮ್​​, ಕುವೆಂಪು ಭಾವಚಿತ್ರವನ್ನು ಅಳವಡಿಸಿ. ದಾರ್ಶನಿಕರು, ವಿಚಾರವಂತರು, ರಾಷ್ಟ್ರ ನಾಯಕರ ಭಾವಚಿತ್ರ ಅಳವಡಿಸಿ. ಭಾರತದ ಸಂಸ್ಕೃತಿ ಪರಂಪರೆ, ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ವಿಚಾರಧಾರೆ, ಆದರ್ಶ ಸಾರ್ವಕಾಲಿಕ ಸತ್ಯ ಮತ್ತು ಅನುಕರಣೀಯ. ಹೀಗಾಗಿ ಸುವರ್ಣಸೌಧದ ಅಸೆಂಬ್ಲಿ ಹಾಲ್​​ನಲ್ಲಿ ಇವರೆಲ್ಲರ ಭಾವಚಿತ್ರ ಅಳವಡಿಸಿ ಎಂದು ಸ್ಪೀಕರ್​ ಕಾಗೇರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.


Spread the love

By admin