ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಘೋಷಿಸಿದ್ದಾರೆ.
ಡಿಸೆಂಬರ್ 25 ರಂದು ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.
ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಾರ್ವಜನಿಕ ಬದುಕಿಗೆ ಬರಲು ನಿರ್ಧರಿಸಿದ್ದು, ಡಿಸೆಂಬರ್ 25 ರಂದು ಎಲ್ಲಾ ವಿಚಾರಗಳ ಬಗ್ಗೆ ಅಧಿಕೃತವಾಗಿ ಘೋಷಿಸುತ್ತೇನೆ. ಸಾರ್ವಜನಿಕ ಬದುಕು ಪ್ರಾರಂಭಿಸಲು ಜನರ ಆಶೀರ್ವಾದ ಬೇಕಿದ್ದು, ಎಲ್ಲಾ ಕಡೆ ಹೋಗುತ್ತಿದ್ದೇನೆ. ಮಠಗಳಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಮಠದಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ. ಡಿಸೆಂಬರ್ 25 ರಂದು ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಅವರು, ಗಂಗಾವತಿ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ. ಡಿ 25 ರಂದು ಬೆಂಗಳೂರಿನಲ್ಲಿ ಎಲ್ಲ ವಿಚಾರ ಹಂಚಿಕೊಳ್ಳುತ್ತೇನೆ ಎಂದರು.