ಬೆಳಗಾವಿ: ಹೊಲದಲ್ಲಿ ಮನೆ ನಿರ್ಮಾಣಕ್ಕೆ ಭೂ ಪರಿವರ್ತನೆ ಸಂಬಂಧ ಶೀಘ್ರವೇ ಕಾಯ್ದೆ ತರಲಾಗುವುದು ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.