Spread the love

ಬೆಳಗಾವಿ: ಚೀನಾ, ಜಪಾನ್ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಪ್ರಕರಣಗಳು ತೀವ್ರ ಏರಿಕೆ ಕಾಣುತ್ತಿದ್ದು, ಕೇಂದ್ರ ಸರ್ಕಾರ ರಾಜ್ಯಗಳಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.

ಕೊರೋನಾ ಏರಿಕೆ ಬಗ್ಗೆ ಬೆಳಗಾವಿ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.

ಸುಧಾಕರ್, ವಿದೇಶಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಆತಂಕವಿಲ್ಲ. ಆದರೂ ಕೆಲವೊಂದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಲಸಿಕಾಕರಣ ಶೇಕಡ 100ರಷ್ಟು ಹಾಕಿದ್ದು, ಮೂರನೇ ಡೋಸ್ ನೀಡಲು ಹೆಚ್ಚಿನ ಒತ್ತು ನೀಡಲಾಗುತ್ತದೆ. ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಸದ್ಯಕ್ಕೆ ಕೋವಿಡ್ ಆತಂಕ ಇಲ್ಲ. ಆದರೆ, ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುವುದು. ಮುಖ್ಯಮಂತ್ರಿಗಳು ಹಾಗೂ ನಾನು ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಿದ್ದೇವೆ. ಮಾರ್ಗದರ್ಶನ, ಸಲಹೆ ಪಡೆದು ನಂತರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.


Spread the love